ನವದೆಹಲಿ: ರಾಜ್ಯಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುವಿಕೆಯ ಸಂಬಂಧ ಕೇಂದ್ರ ಸರ್ಕಾರಕ್ಕೆ ಇದುವರೆಗೆ ತಮ್ಮ ಪ್ರತಿಕ್ರಿಯೆ ನೀಡದ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಆರು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.

‘ಈ ರಾಜ್ಯಗಳು ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂಬುದನ್ನು ಹೇಳಲು ನಾವು ವಿಫಲರಾಗಿದ್ದೇವೆ. ಈ ರಾಜ್ಯಗಳ ಪ್ರತಿಕ್ರಿಯೆಯನ್ನು ಪಡೆಯಲು ಕೇಂದ್ರ ಸರ್ಕಾರಕ್ಕೆ ನಾವು ಕೊನೆಯ ಅವಕಾಶವನ್ನು ನೀಡುತ್ತೇವೆ. ವಿಫಲವಾದರೆ, ಈ ಬಗ್ಗೆ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ ಎಂಬುದಾಗಿ ಭಾವಿಸುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಎ.ಎಸ್. ಓಕಾ ಮತ್ತು ಜೆ.ಬಿ. ಪಾರ್ದೀವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಹೇಳಿದೆ.

ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ವರದಿಯನ್ನು ಉಲ್ಲೇಖಿಸಿ, ‘ಇದುವರೆಗೆ 24 ರಾಜ್ಯಗಳು ಹಾಗೂ 6 ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪ್ರತಿಕ್ರಿಯೆಯನ್ನು ಕೇಂದ್ರಕ್ಕೆ ಸಲ್ಲಿಸಿವೆ. ಇನ್ನೂ 6 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪ್ರತಿಕ್ರಿಯೆ ನೀಡಿಲ್ಲ’ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.