ನವದೆಹಲಿ: ಇಲ್ಲಿನ ರೋಸ್ ಅವೆನ್ಯೂನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಜೂನ್ 15ರವರೆಗೆ ಕಾಲಾವಕಾಶ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಸೋಮವಾರ ಈ ಕುರಿತ ತೀರ್ಪು ನೀಡಿದೆ.

‘ನ್ಯಾಯಾಂಗಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಎಎಪಿಯ ಕಚೇರಿ ಇರುವ ಜಾಗವನ್ನು ದೆಹಲಿ ಹೈಕೋರ್ಟ್‌ಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 15ರ ಒಳಗೆ ಕಚೇರಿ ತೆರವುಗೊಳಿಸಬೇಕು‘ ಎಂದು ಎಎಪಿಗೆ ಹೇಳಿದೆ.

‘ಎಎಪಿ ಕಚೇರಿ ಇರುವ ಜಾಗದ ಮೇಲೆ ಆ ಪಕ್ಷಕ್ಕೆ ಯಾವುದೇ ಅಧಿಕಾರ ಇಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಜಾಗವನ್ನು ತೆರವುಗೊಳಿಸಲು 2024ರ ಜೂನ್ 15ರವರೆಗೆ ಕಾಲಾವಕಾಶ ನೀಡಲಾಗುತ್ತಿದೆ’ ಎಂದು ಪೀಠ ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.