ನವದೆಹಲಿ: ಅಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಒಂದೇ ಒಂದು ನಿದರ್ಶನವಿದ್ದರೂ ಅದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದುದ್ದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನಮ್ಮ ಅನುಮತಿ ಇಲ್ಲದೆ ದೇಶದಲ್ಲಿ ಯಾವುದೇ ಆರೋಪಿಯ ಆಸ್ತಿಗಳನ್ನು ತೆರವು ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡುವ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯಪಟ್ಟಿದೆ.

ಈ ಆದೇಶವು ಸಾರ್ವಜನಿಕ ರಸ್ತೆಗಳು, ಫುಟ್‌ಪಾತ್‌ಗಳು ಮತ್ತು ಇತರೆಡೆ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಹೇಳಿದೆ.

‘ಅಕ್ರಮವಾಗಿ ಕಟ್ಟಡಗಳನ್ನು ತೆರವು ಮಾಡಿದ ಒಂದೇ ಒಂದು ನಿದರ್ಶನವಿದ್ದರೂ ಅದು ನಮ್ಮ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದದ್ದಾಗಿದೆ’ಎಂದು ಪೀಠ ಹೇಳಿದೆ.

ಹಲವು ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಕಟ್ಟಡಗಳನ್ನು ಅಕ್ರಮವಾಗಿ ತೆರವು ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಈ ಬಗ್ಗೆ ನ್ಯಾಯಾಲಯಕ್ಕೆ ಉತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸುತ್ತ ಸಂಕಥನ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಅಕ್ಟೋಬರ್ 1ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.