ನವದೆಹಲಿ: ಜೀವನ ಮತ್ತು ಸ್ವಾತಂತ್ರ್ಯ ಅತ್ಯಂತ ಪ್ರಮುಖ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಲೋಕಸಭೆ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರಶ್ನಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಇ.ಡಿ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರಿಗೆ ಹಲವು ಪ್ರಶ್ನೆಗಳನ್ನು ಹಾಕಿದೆ. ಅಲ್ಲದೆ, ಇದೇ ಶುಕ್ರವಾರ ಈ ಬಗ್ಗೆ ಉತ್ತರಿಸುವಂತೆ ಇ.ಡಿಗೆ ಸೂಚಿಸಿದೆ.

‘ಜೀವನ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯವಾದವು. ನೀವು ಅದನ್ನು ನಿರಾಕರಿಸುವಂತಿಲ್ಲ’ ಎಂದು ಹೇಳಿದೆ.

ಕೇಜ್ರಿವಾಲ್ ಬಂಧನದ ಸಮಯದ ಬಗ್ಗೆ ಪ್ರಶ್ನೆ ಎತ್ತಿರುವ ನ್ಯಾಯಪೀಠ, ಲೋಕಸಭಾ ಚುನಾವಣೆಗೂ ಮುನ್ನ ಬಂಧಿಸಿದ್ದೇಕೆ ಎಂದು ಪ್ರಶ್ನಿಸಿದೆ.

ಪ್ರಕರಣದ ತನಿಖೆ ಆರಂಭ ಮತ್ತು ಬಂಧನದ ನಡುವಿನ ದೀರ್ಘ ಅಂತರದ ಬಗ್ಗೆ ಪ್ರಶ್ನೆ ಎತ್ತಿರುವ ನ್ಯಾಯಪೀಠ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್ಎ) ಸೆಕ್ಷನ್ 8ರ ಅಡಿಯಲ್ಲಿ 365 ದಿನಗಳ ಗರಿಷ್ಠ ಕಾಲಮಿತಿ ಇದೆ ಎಂದು ಹೇಳಿದೆ.

ನ್ಯಾಯಾಲಯವು ಶುಕ್ರವಾರವೂ ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.