ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಡಿ ಯುಜಿಸಿ–ನೆಟ್ ಪರೀಕ್ಷೆಯನ್ನು ರದ್ದು ಮಾಡಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲ ಪರೀಕ್ಷಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ಅರ್ಜಿ ವಿಚಾರಣೆಗೆ ಪರಿಗಣಿಸುವುದು ಗೊಂದಲಕ್ಕೆ ಎಡೆ ಮಾಡಲಿದೆ ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವನ್ನೊಳಗೊಂಡ ಪೀಠವು, ಆಗಸ್ಟ್ 21ರಂದು ಸರ್ಕಾರ ಮರುಪರೀಕ್ಷೆ ನಡೆಸುತ್ತಿದೆ. ಹೀಗಾಗಿ, ಸುಮಾರು 9 ಲಕ್ಷದಷ್ಟಿರುವ ವಿದ್ಯಾರ್ಥಿಗಳಿಗೆ ಸ್ಪಷ್ಟತೆ ಇರಬೇಕಾಗುತ್ತದೆ ಎಂದು ಹೇಳಿದೆ.

‘ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದರಿಂದ ಗಂಭೀರ ಪರಿಣಾಮ ಉಂಟಾಗುತ್ತದೆ. ಎಲ್ಲೆಡೆ ಗೊಂದಲ ಸೃಷ್ಟಿಯಾಗುತ್ತದೆ’ಎಂದು ಪ್ರವೀಣ್ ದಬಾಸ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸುವ ವೇಳೆ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಜೂನ್ 18ರಂದು ನಡೆದ ಪರೀಕ್ಷೆಯನ್ನು ಒಂದು ದಿನದ ನಂತರ ರದ್ದು ಮಾಡಲಾಗಿದೆ ಎಂದು ಪೀಠ ಹೇಳಿದೆ.

ನೆಟ್ ಪರೀಕ್ಷೆ ರದ್ದು ಪ್ರಶ್ನಿಸಿರುವ ಅರ್ಜಿಯನ್ನು ಸದ್ಯದ ಪರಿಸ್ಥಿತಿಯಲ್ಲಿ ಅಂಗೀಕರಿಸಿದರೆ ಅನಿಶ್ವಿತತೆಗೆ ದಾರಿಮಾಡಿಕೊಡಲಿದೆ. ದೊಡ್ಡ ಗೊಂದಲ ಸೃಷ್ಟಿಸುತ್ತದೆ ಎಂದಿರುವ ಸಿಜೆಐ, ನೀಟ್–ಯುಜಿ ಪ್ರಹಸನದ ಬಳಿಕ ಕೇಂದ್ರ ಸರ್ಕಾರ ಮತ್ತಷ್ಟು ಎಚ್ಚರಿಕೆ ವಹಿಸಬೇಕಿತ್ತು. ಸದ್ಯ, ನಡೆಯುತ್ತಿರುವ ನೆಟ್ ಮರು ಪರೀಕ್ಷೆ ಪ್ರಕ್ರಿಯೆ ಮುಂದುವರಿಯಲಿ ಎಂದಿದ್ಧಾರೆ.

ಈ ಸಂಬಂಧ ಈ ಹಿಂದೆ ಸಲ್ಲಿಸಲಾಗಿದ್ದ ಪಿಐಎಲ್ ವಜಾಗೊಳಿಸಿದ್ದ ನ್ಯಾಯ ಪೀಠ, ಈ ಅರ್ಜಿಯನ್ನು ಒಬ್ಬ ವಕೀಲರು ಸಲ್ಲಿದ್ದಾರೆಯೇ ಹೊರತು ಸಂತ್ರಸ್ತ ಅಭ್ಯರ್ಥಿಗಳಲ್ಲ ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.