ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಕಾಂಗ್ರೆಸ್ನ ಆರು ಬಂಡಾಯ ಶಾಸಕರನ್ನು ಅನರ್ಹಗೊಳಿಸಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸ್ಪೀಕರ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಅರ್ಜಿಯ ಸಂಬಂಧ ಹಿಮಾಚಲ ಪ್ರದೇಶದ ವಿಧಾನಸಭೆ ಸ್ಪೀಕರ್ ಕುಲ್ದೀಪ್ ಸಿಂಗ್ ಪಥಾನಿಯಾ ಅವರಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಕಾಂಗ್ರೆಸ್ ಶಾಸಕರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ತನ್ನ ನಿರ್ಧಾರ ಪ್ರಕಟಿಸುವವರೆಗೆ ಶಾಸಕರು ಮತದಾನ ಮಾಡುವುದಕ್ಕೆ ಅಥವಾ ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಭಾಗಹಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಪೀಠವು ಪ್ರಕರಣದ ವಿಚಾರಣೆಯನ್ನು ಮೇ 6ಕ್ಕೆ ನಿಗದಿ ಮಾಡಿದ್ದು, ಬಂಡಾಯ ಶಾಸಕರಿಗೆ ತಮ್ಮ ವಾದ ದಾಖಲಿಸಲು ಒಂದು ವಾರ ಕಾಲಾವಕಾಶ ನೀಡಿದೆ.

ಖಾಲಿ ಇರುವ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆಯು ಮೇ 7ರಿಂದ ಆರಂಭವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.