ನವದೆಹಲಿ: ಬಾಲಿವುಡ್ ನಟಿ ರಿಯಾ ಚಕ್ರವರ್ತಿ ವಿರುದ್ಧದ ಲುಕ್ಔಟ್ ನೋಟಿಸ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ, ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠವು, ತನಿಖಾ ಸಂಸ್ಥೆಯ ಮೇಲ್ಮನವಿಯನ್ನು ‘ಕ್ಷುಲ್ಲಕ’ ಎಂದಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಲುಕ್ಔಟ್ ನೋಟಿಸ್ಗಳನ್ನು (ಎಲ್ಒಸಿ) 2020ರಲ್ಲಿ ಹೊರಡಿಸಲಾಗಿತ್ತು. ಫೆ. 22ರಂದು ಬಾಂಬೆ ಹೈಕೋರ್ಟ್ ಇವನ್ನು ರದ್ದುಗೊಳಿಸಿತ್ತು.

2020ರ ಜೂನ್ 14ರಂದು ಸುಶಾಂತ್ ಸಿಂಗ್, ಬಾಂದ್ರಾದ ಉಪನಗರದಲ್ಲಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಸುಶಾಂತ್ನ ಗೆಳತಿ ಹಾಗೂ ನಟಿ ರಿಯಾ ಮತ್ತು ಅವರ ಕುಟುಂಬದ ಸದಸ್ಯರು ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ 2020ರ ಜುಲೈನಲ್ಲಿ ರಜಪೂತ್ನ ತಂದೆ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣ ಸಿಬಿಐಗೆ ವರ್ಗಾವಣೆಗೊಂಡಿತ್ತು.

ರಜಪೂತ್ಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ರಿಯಾ ಹಾಗೂ ಆಕೆಯ ಸಹೋದರ ಶೋಯಿಕ್ನನ್ನು ಮಾದಕವಸ್ತು ನಿಯಂತ್ರಣ ಸಂಸ್ಥೆಯು (ಎನ್ಸಿಬಿ) 2020ರಲ್ಲಿ ಬಂಧಿಸಿತ್ತು. ನಂತರ ಇಬ್ಬರೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.