ನವದೆಹಲಿ: ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್, ಎಲ್ಗಾರ್–ಪರಿಷತ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖಾ ಅವರನ್ನು 24 ಗಂಟೆಗಳ ಒಳಗಾಗಿ ಗೃಹ ಬಂಧನದಲ್ಲಿ ಇರಿಸುವಂತೆ ಶುಕ್ರವಾರ ಸೂಚಿಸಿದೆ.

ನವಲಖಾ ಅವರನ್ನು ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಮುಂಬೈನ ತಲೋಜಕಾರಾಗೃಹದಲ್ಲಿ ಇರಿಸಲಾಗಿದೆ.

ಸುಪ್ರೀಂಕೋರ್ಟ್, ನ.10ರಂದು ನವಲಖಾ ಅವರನ್ನು ಗೃಹ ಬಂಧನದಲ್ಲಿ ಇರಿಸುವಂತೆ ನೀಡಿದ್ದ ತೀರ್ಪು ಪರಿಶೀಲಿಸುವಂತೆ ಎನ್‌ಐಎ ಕೇಳಿತ್ತು. ನವಲಖಾ ಅವರು ಸತತವಾಗಿ ಹಾದಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಇವರು ವಾಸಿಸಲು ಬಯಸುತ್ತಿರುವ ಮನೆಯಲ್ಲಿಯೇ ಸಿಪಿಐ ಗ್ರಂಥಾಲಯ ಇದೆ. ಹೀಗಾಗಿ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಎನ್ಐಎ ಮನವಿ ಮಾಡಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಋಷಿಕೇಶ್ ರಾಯ್ ಅವರನ್ನು ಒಳಗೊಂಡ ನ್ಯಾಯಪೀಠ, ‘ಸಿಪಿಐ ಗ್ರಂಥಾಲಯ ಇದ್ದರೆ ಸಮಸ್ಯೆ ಏನು, ಅದು ಮಾನ್ಯತೆ ಪಡೆದ ರಾಜಕೀಯ ಪಕ್ಷವಲ್ಲವೇ ಎಂದು ಪ್ರಶ್ನಿಸಿದೆ’.

ಅಲ್ಲದೆ ನವಲಖಾ ಅವರನ್ನು ಗೃಹ ಬಂಧನದಲ್ಲಿ ಇಡುವ ಕಟ್ಟಡದ ಮೊದಲನೆಯ ಮಹಡಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಕೋರ್ಟ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.