ನವದೆಹಲಿ: ಗಾಜಾದಲ್ಲಿ ಯುದ್ಧ ಮಾಡುತ್ತಿರುವ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತಿನಲ್ಲಿ ತೊಡಗಿರುವ ಭಾರತೀಯ ಸಂಸ್ಥೆಗಳು ಒಪ್ಪಂದದ ಕಟ್ಟುಪಾಡುಗಳನ್ನು ಉಲ್ಲಂಘಿಸಿದರೆ ಮೊಕದ್ದಮೆ ಹೂಡಬಹುದು. ಆದರೆ ಪೂರೈಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಹೇಳಿದೆ.

‘ದೇಶದ ವಿದೇಶಾಂಗ ನೀತಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ನಾವು ನಿರ್ದೇಶನ ನೀಡಲು ಸಾಧ್ಯವೇ? ಏಕೆಂದರೆ ಇದು ವಿದೇಶಾಂಗ ನೀತಿಯ ಮೇಲೆ ಪರಿಣಾಮ ಬೀರಲಿದೆ. ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ನಮಗೂ ಗೊತ್ತಿಲ್ಲ’ ಎಂದು ಸಿಜೆಐ ಹೇಳಿದ್ದಾರೆ.

ಅಶೋಕ್ ಕುಮಾರ್ ಶರ್ಮಾ ಮತ್ತು ಇತರರು ವಕೀಲ ಪ್ರಶಾಂತ್ ಭೂಷಣ್ ಮೂಲಕ ಈ ಕುರಿತಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.