ನವದೆಹಲಿ: ರಾಜ್ಯದ ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧದ ಮಾನನಷ್ಟ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ್ದ, ವಿವಾದಾಸ್ಪದ ಪೋಸ್ಟ್ಗಳನ್ನು ತೆಗೆಯಲು ನೀಡಿದ್ದ ಆದೇಶಕ್ಕೆ ಅನುಗುಣವಾಗಿ ರೂಪಾ ಅವರು ಪ್ರಮಾಣಪತ್ರ ಸಲ್ಲಿಸಿದ ನಂತರ, ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

‘ಇಬ್ಬರ ನಡುವಿನ ಎಲ್ಲ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ನಾವು ಪ್ರಯತ್ನ ನಡೆಸುತ್ತಿರುವ ಕಾರಣ, ಇಬ್ಬರಲ್ಲಿ ಯಾರು ಕೂಡ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು, ಮಾಹಿತಿ ನೀಡಬಾರದು’ ಎಂದು ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠವು ಆದೇಶದಲ್ಲಿ ಹೇಳಿದೆ. ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಲಾಗಿದೆ.

ರೋಹಿಣಿ ಅವರು ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ದೂರನ್ನು ರದ್ದು ಮಾಡಬೇಕು ಎಂದು ರೂಪಾ ಅವರು ಅರ್ಜಿ ಸಲ್ಲಿಸಿದ್ದಾರೆ. ರೂಪಾ ಅವರಿಗೆ, ಸಾಮಾಜಿಕ ಜಾಲತಾಣಗಳ ಮೂಲಕ ಮಾಡಿರುವ ಕೆಲವು ಪೋಸ್ಟ್ಗಳನ್ನು ತೆಗೆಯುವಂತೆ ಕೋರ್ಟ್ ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.