ನವದೆಹಲಿ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲ ಶಿಕ್ಷಣ ಸಂಸ್ಥೆಗಳನ್ನು ನವೆಂಬರ್ 1ರಿಂದ ಪುನರಾರಂಭಿಸಲು ಮತ್ತು ಕೋವಿಡ್ ಮಾರ್ಗಸೂಚಿಯೊಂದಿಗೆ ಛತ್ ಪೂಜೆ ಆಚರಣೆಗೆ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ತಿಳಿಸಿದ್ದಾರೆ.

ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ‘ನ.1ರಿಂದ ಶಾಲಾ, ಕಾಲೇಜುಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಭೌತಿಕ ತರಗತಿಗಳ ಜೊತೆಗೆ, ಆನ್‌ಲೈನ್ ತರಗತಿಗಳನ್ನು ಮುಂದುವರಿಸುವಂತೆ ಸೂಚಿಸಲಾಗಿದೆ’ ಎಂದರು.

‘ಶೇ 50ರಷ್ಟು ಮಕ್ಕಳಿಗೆ ಶಾಲೆಗಳಿಗೆ ಬರುವಂತೆ ಸೂಚಿಸಬೇಕು. ಆದರೆ ಪೋಷಕರಿಗೆ ಈ ವಿಷಯದಲ್ಲಿ ಒತ್ತಡ ಹೇರಬಾರದು. ಎಲ್ಲ ಶಿಕ್ಷಕರು ಕಡ್ಡಾಯವಾಗಿ ಎರಡೂ ಡೋಸ್‌ಗಳನ್ನು ಪಡೆದಿರಬೇಕು. ಲಸಿಕೆ ಹಾಕಿಸದವರು ಆದಷ್ಟು ಬೇಗ ಹಾಕಿಸಿಕೊಳ್ಳಬೇಕು ‘ ಎಂದು ತಿಳಿಸಿದರು.

ರಾಜಧಾನಿಯಾದ್ಯಂತ ಪೂರ್ವನಿರ್ಧರಿತ ಸ್ಥಳಗಳಲ್ಲಿ ಛತ್ ಪೂಜೆ ನಡೆಸಲು ನಿರ್ಬಂಧಿತ ಸಂಖ್ಯೆಯ ಜನರಿಗೆ ಅವಕಾಶ ನೀಡಲಾಗುವುದು ಎಂದು ಸಿಸೋಡಿಯಾ ಹೇಳಿದರು.

ಸದ್ಯಕ್ಕೆ ದೆಹಲಿಯಲ್ಲಿ ಕೋವಿಡ್ ಸೊಂಕು ನಿಯಂತ್ರಣದಲ್ಲಿದೆ. ಆದರೂ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಎಲ್ಲ ರೀತಿಯ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.