ಚೆನ್ನೈ: ‘ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಿಂದ (ನೀಟ್) ರಾಜ್ಯಕ್ಕೆ ವಿನಾಯಿತಿ ನೀಡಬೇಕು’ ಎಂದುಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ಮನವಿ ಮಾಡಿದರು.

ವರ್ಚುವಲ್ ಮೂಲಕ ನಡೆದ 11 ಸರ್ಕಾರಿ ವೈದ್ಯ ಕಾಲೇಜುಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಬೇಡಿಕೆಯನ್ನಿಟ್ಟರು.

ತಮಿಳುನಾಡು ವಿದ್ಯಾರ್ಥಿಗಳಿಗೆ ನೀಟ್ನಿಂದ ವಿನಾಯಿತಿ ನೀಡುವ ಸಂಬಂಧ ಇತ್ತೀಚೆಗೆ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಆದರೆ, ಈ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲ ಆರ್.ಎನ್.ರವಿ ವಿಳಂಬ ಮಾಡುತ್ತಿದ್ದು, ಅವರ ವಿರುದ್ಧ ಡಿಎಂಕೆ ಇತ್ತೀಚೆಗೆ ವಾಗ್ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸ್ಟಾಲಿನ್ ಅವರು ಪ್ರಧಾನಿ ಮುಂದೆ ಈ ಬೇಡಿಕೆ ಮಂಡಿಸಿದ್ದಾರೆ.

‘ತಮಿಳುನಾಡು ರೂಪಿಸಿರುವ ಪ್ರವೇಶ ನೀತಿಯುಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಮುಖ್ಯಪಾತ್ರ ವಹಿಸುತ್ತದೆ. ಹೀಗಾಗಿ, ಈ ನೀತಿಯನ್ನು ಸಂರಕ್ಷಿಸುವ ಉದ್ದೇಶದಿಂದ ರಾಜ್ಯಕ್ಕೆ ನೀಟ್ನಿಂದ ವಿನಾಯಿತಿ ನೀಡಬೇಕು ಎಂಬ ಬೇಡಿಕೆಯನ್ನು ಮಂಡಿಸುತ್ತಲೇ ಇದ್ದೇವೆ. ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಈ ಮನವಿಯನ್ನು ಪರಿಗಣಿಸಬೇಕು’ ಎಂದು ಪ್ರಧಾನಿಗೆ ಸ್ಟಾಲಿನ್ ಕೋರಿದರು.

ಆದರೆ, ತಮ್ಮ ಭಾಷಣದಲ್ಲಿ ಮೋದಿ ಅವರು ನೀಟ್ ಕುರಿತು ಪ್ರಸ್ತಾಪಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.