ಲಖನೌ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸಬೇಕು ಮತ್ತು ವೈದ್ಯಕೀಯ ಪ್ರವೇಶದ ಹಳೆಯ ಪದ್ಧತಿಯನ್ನು ಮರುಸ್ಥಾಪಿಸಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಅಖಿಲ ಭಾರತ ನೀಟ್–ಯುಜಿ ವೈದ್ಯಕೀಯ ಪರೀಕ್ಷೆಯಲ್ಲಿನ ಅಕ್ರಮಗಳು ಗಂಭೀರ ವಿಷಯವಾಗಿದೆ. ಇದರ ಬಗೆಗಿನ ಚರ್ಚೆ ಸಂಸತ್ ಮತ್ತು ಸುಪ್ರೀಂ ಕೋರ್ಟ್ವರೆಗೂ ತಲುಪಿದೆ. ಫಲಿತಾಂಶ ಏನೇ ಇರಲಿ, ಇದರಿಂದ ಲಕ್ಷಾಂತರ ಅಭ್ಯರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಉಂಟಾದ ನೋವು ಹಾಗೂ ಮಾನಸಿಕ ಸಂಕಟ ಅವರನ್ನು ಯಾವಾಗಲೂ ಕಾಡುತ್ತದೆ’ ಎಂದು ಹೇಳಿದ್ದಾರೆ.

'ಇಂತಹ ಮಹತ್ವದ ಪರೀಕ್ಷೆಯನ್ನು ಸರಿಯಾದ ಕ್ರಮದಲ್ಲಿ ನಡೆಸುವುದಾಗಿ ಜನರಿಗೆ ಭರವಸೆ ನೀಡುವಲ್ಲಿ ಕೇಂದ್ರ ವಿಫಲವಾಗಿದ್ದು, ಸಮಸ್ಯೆಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ಆದ್ದರಿಂದ ಕೇಂದ್ರೀಕೃತ ನೀಟ್ ಯುಜಿ–ಪಿಜಿ ಪರೀಕ್ಷೆಯನ್ನು ರದ್ದುಗೊಳಿಸಿ, ಹಳೆಯ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು’ ಎಂಬುದು ಹಲವು ರಾಜ್ಯ ಸರ್ಕಾರಗಳ ಬೇಡಿಕೆಯಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ನಲ್ಲಿ ನಡೆದಿರುವ ಅಕ್ರಮಗಳ ಕುರಿತು ಹಲವು ವಿರೋಧ ಪಕ್ಷಗಳು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.
.‘ನೀಟ್’ ರದ್ದು ಮಾಡಲು ಕೇಂದ್ರಕ್ಕೆ ಒತ್ತಾಯ ಸೇರಿ ಹಲವು ನಿರ್ಣಯ ಅಂಗೀಕಾರ.'ನೀಟ್–ಯುಜಿ' ಪರೀಕ್ಷೆ ರದ್ದು, ಮರು ಪರೀಕ್ಷೆ ತಳ್ಳಿಹಾಕಿದ ಸುಪ್ರೀಂ ಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.