ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ನಾಪತ್ತೆಯಾಗಿರುವವರ ಪತ್ತೆಗಾಗಿ ಇಂದು (ಭಾನುವಾರ) ಕಾರ್ಯಾಚರಣೆ ಪುನರಾರಂಭಗೊಂಡಿದೆ ಎಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಯನಾಡ್‌ನ ಮುಂಡಕ್ಕೈ ಮತ್ತು ಚೂರಲ್‌ಮಲ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಇದೀಗ ಸೇನೆ, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ವಿವಿಧ ಸೇವಾ ಸಂಘಟನೆಗಳ ಸ್ವಯಂಸೇವಕರು ಸೇರಿದಂತೆ ಸಂತ್ರಸ್ತರ ಸಂಬಂಧಿಕರು ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಇಚ್ಚಿಸುವವರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಜುಲೈ 30ರಂದು ಸಂಭವಿಸಿದ್ದ ಭೂಕುಸಿತದಲ್ಲಿ 229 ಮಂದಿ ಮೃತಪಟ್ಟಿದ್ದು, 130ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು: ಮೋದಿ ಭರವಸೆ

ವಯನಾಡ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ತೊಂದರೆಗೆ ಒಳಗಾಗಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣೆ ಹಾಗೂ ಪುನರ್ವಸತಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.

ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡವರಿಗೆ ನೆರವು ನೀಡುವ ಕೆಲಸದಲ್ಲಿ ಕೇಂದ್ರ ಸರ್ಕಾರವು ಕೇರಳ ಸರ್ಕಾರದ ಜೊತೆ ಇರಲಿದೆ ಎಂದು ಅವರು ಹೇಳಿದ್ದಾರೆ.

ಪರಿಹಾರ ಹಾಗೂ ಪುನರ್ವಸತಿ ಕ್ರಮಗಳು, ಅನಾಥರಾದ ಮಕ್ಕಳಿಗೆ ದೀರ್ಘಾವಧಿಯಲ್ಲಿ ಅಗತ್ಯವಿರುವ ನೆರವುಗಳ ಬಗ್ಗೆ ವಿಸ್ತೃತವಾದ ಮನವಿಪತ್ರ ನೀಡುವಂತೆ ಮೋದಿ ಅವರು ಕೇರಳ ಸರ್ಕಾರಕ್ಕೆ ತಿಳಿಸಿದ್ದಾರೆ. ‘ಕೇರಳದ ಮನವಿಪತ್ರದ ವಿಚಾರವಾಗಿ ಕೇಂದ್ರ ಉದಾರ ಮನಸ್ಸಿನಿಂದ ನಿಲುವು ತಾಳಲಿದೆ’ ಎಂದಿದ್ದಾರೆ.
.Wayanad Landslides | ಕೇಂದ್ರ ಸರ್ಕಾರ ಕೇರಳದೊಂದಿಗೆ ನಿಲ್ಲಲಿದೆ: ಮೋದಿ ಭರವಸೆ.Wayanad Landslides | ವಯನಾಡ್ ದುರಂತ ನೆಲದ ದನಿ....PHOTOS | Wayanad Landslide: ಸಂತ್ರಸ್ತರನ್ನು ಸಂತೈಸಿದ ಪ್ರಧಾನಿ ಮೋದಿ.Wayanad Landslides: ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ.Wayanad landslides | ಭರವಸೆ ಜೀವಂತ, ನಿಲ್ಲದ ಶೋಧ.Wayanad landslides: ರಕ್ಷಣಾ ಕಾರ್ಯಾಚರಣೆ ಮುಗಿಸಿ ಭಾಗಶಃ ವಾಪಸ್ ತೆರಳಿದ ಸೇನೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.