ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯ ಗಡಿಯಲ್ಲಿ ಗುರುವಾರ ಸೇನೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಗದು ಮತ್ತು ಮದ್ದುಗುಂಡು ಸಾಗಿಸುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದೆ.

ಏ. 12ರ ಮಧ್ಯರಾತ್ರಿ ರಾಜೋರಿಯ ಬೆರಿ ಪಟ್ಟಣ ಪ್ರದೇಶದ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಅನುಮಾನಾಸ್ಪದ ಚಲನವಲನಗಳ ಬಗ್ಗೆ ವರದಿಯಾಗಿದೆ ಎಂದು ಸೇನೆ ತಿಳಿಸಿದೆ.

ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಡ್ರೋನ್ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ. ರೈಫಲ್‌ಗಳು, ಸೀಲ್ ಮಾಡಿದ ಪ್ಯಾಕ್ ಮತ್ತು ಸ್ವಲ್ಪ ಹಣ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

‘ಈ ಪ್ರದೇಶದ ಹಲವು ಹಳ್ಳಿಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತಷ್ಟು ವಸ್ತುಗಳನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಇದೆ. ಸದ್ಯಕ್ಕೆ ಡ್ರೋನ್ ಹೊಡೆದುರುಳಿಸಲಾಗಿದೆ. ಹೆಚ್ಚಿನ ಮಾಹಿತಿ ನಂತರ ನೀಡಲಾಗುವುದು’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.