ಪೂಂಛ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದ ಪ್ರದೇಶದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

ಗುರುವಾರದಂದು ಎರಡು ಸೇನಾ ವಾಹನಗಳ ಮೇಲೆ ಉಗ್ರರು ನಡೆಸಿದ್ದ ಹಠಾತ್ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಇಬ್ಬರು ಯೋಧರು ಗಾಯಗೊಂಡಿದ್ದರು.

ಸುರಾನ್‌ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯ ಡೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವೆ ಧಾತ್ಯರ್ ಮೋರ್‌ನಲ್ಲಿ ದಾಳಿ ನಡೆದಿತ್ತು.
.ಜಮ್ಮು ಮತ್ತು ಕಾಶ್ಮೀರ |ಸೇನಾ ವಾಹನದ ಮೇಲೆ ಉಗ್ರರ ದಾಳಿ; 5 ಯೋಧರು ಹುತಾತ್ಮ.ಛತ್ತೀಸಗಢ | ಸ್ಫೋಟದಲ್ಲಿ ಯೋಧ ಹುತಾತ್ಮ: ನಾಲ್ವರು ಶಂಕಿತ ನಕ್ಸಲರ ಬಂಧನ.
ಉಗ್ರರ ಪತ್ತೆಗಾಗಿ ವೈಮಾನಿಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಿಶೇಷ ತರಬೇತಿ ಪಡೆದ ಸ್ನಿಫರ್ ಶ್ವಾನ ಬಳಕೆ ಮಾಡಲಾಗಿದೆ. ಈ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಕಾರ್ಯಾಚರಣೆ ಮುಂದುವರಿದಿದ್ದು, ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದೆ. ಹೆಚ್ಚುವರಿ ಸೇನಾಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಂಛ್ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ 'ಎಎನ್‌ಐ' ವಿಡಿಯೊ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.