ನವದೆಹಲಿ: ಹೆಲಿಕಾಪ್ಟರ್ ಅವಘಡದಲ್ಲಿ ಮೃತಪಟ್ಟ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ದೆಹಲಿಯ ಕಾಮರಾಜ್ ಮಾರ್ಗದಲ್ಲಿರುವ ಅವರ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

ತಮಿಳುನಾಡಿನ ನೀಲಗೀರಿ ಜಿಲ್ಲೆಯ ಕೊನೂರುಬಳಿ ಗುರುವಾರಸಂಭವಿಸಿದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು 11 ಜನ ಸೇನಾ ಸಿಬ್ಬಂದಿ ಮೃತಪಟ್ಟಿದ್ದರು.

ಮನೆಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಯ್ದ ಕೆಲವರನ್ನು ಮಾತ್ರ ಮನೆ ಒಳಗಡೆ ಬಿಡಲಾಗುತ್ತಿದೆ.

ಬಿಪಿನ್ ರಾವತ್ ದಂಪತಿ ತಮ್ಮ ಇಬ್ಬರು ಹೆಣ್ಣು ಮಕ್ಕಳಾದ ಕೃತಿಕಾ ರಾವತ್ ಹಾಗೂ ತರಿಣಿ ರಾವತ್ ಅವರನ್ನು ಅಗಲಿದ್ದಾರೆ.

ನಿನ್ನೆ ಸಂಜೆರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಹಾಗೂ ಜನರಲ್ ಮುಕುಂದ್ ನರವಾಣೆ ರಾವತ್ ಅವರ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಸಾಂತ್ವಾನ ಹೇಳಿದ್ದರು.

ನವದೆಹಲಿಯಲ್ಲಿ ಸಂಪೂರ್ಣ ಸೇನಾ ಗೌರವದೊಂದಿಗೆ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ರಾಜ್ನಾಥ್ ಸಿಂಗ್ ಅವರು ತಿಳಿಸಿದ್ದು, ಇಂದು ಸಂಜೆ ಮೃತರ ಪಾರ್ಥಿವ ಶರೀರ ಅಲ್ಲಿಗೆ ತಲುಪಬಹುದು ಎನ್ನಲಾಗಿದೆ.

ಇದನ್ನೂ ಓದಿ:ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ಕಾಪ್ಟರ್ ದುರಂತದ ತನಿಖೆ: ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.