ನವದೆಹಲಿ: ಸಂಸತ್ತಿನ ಭದ್ರತಾ ಲೋಪದ ವಿಚಾರವಾಗಿ ಚರ್ಚೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದ್ದು ಹಾಗೂ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ವಿರೋಧ ಪಕ್ಷಗಳ 45 ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

ಈ ಪೈಕಿ 34 ಸಂಸದರನ್ನು ಚಳಿಗಾಲದ ಅಧಿವೇಶನದ ಬಾಕಿ ಅವಧಿಗೆ ಮತ್ತು ಉಳಿದ 11 ಮಂದಿಯನ್ನು ಹಕ್ಕು ಬಾಧ್ಯತಾ ಸಮಿತಿ ವರದಿ ಬರುವವರೆಗೆ ಅಮಾನತು ಮಾಡಲಾಗಿದೆ. ರಾಜ್ಯಸಭೆ ನಾಯಕ ಪಿಯೂಷ್ ಗೋಯಲ್ ಅವರು ಮಂಡಿಸಿದ ಅಮಾನತು ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಹಕ್ಕು ಬಾಧ್ಯತಾ ಸಮಿತಿಗೆ ಸೂಚಿಸಲಾಗಿದೆ. ಅಲ್ಲಿಯವರೆಗೂ 11 ಸಂಸದರು ಸದನದ ಕಲಾಪಗಳಿಗೆ ಹಾಜರಾಗುವಂತಿಲ್ಲ.

ಕಾಂಗ್ರೆಸ್‌ನ ಪ್ರಮೋದ್ ತಿವಾರಿ, ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್ ಅವರು ಅಮಾನತಾದ ಸಂಸದರ ಪಟ್ಟಿಯಲ್ಲಿದ್ದಾರೆ.
.ಸಂಸತ್ ಭದ್ರತಾ ವೈಫಲ್ಯ | ಶಾ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ; 33 ಸಂಸದರ ಅಮಾನತು.ಪ್ರಜಾಪ್ರಭುತ್ವದ ಶಿಷ್ಟಾಚಾರಗಳನ್ನು ಕಸದ ಬುಟ್ಟಿಗೆ ಎಸೆದ ಮೋದಿ ಸರ್ಕಾರ: ಖರ್ಗೆ.
ಲೋಕಸಭೆಯ 33 ಸಂಸದರನ್ನು ಅಮಾನತುಗೊಳಿಸಿದ ಕೆಲವೇ ಹೊತ್ತಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಕೊನೆಗೊಳ್ಳಲಿದೆ.

ಅಮಾನತಾದ ಸಂಸದರ ಸಂಖ್ಯೆ 92ಕ್ಕೆ ಏರಿಕೆ
ಡಿಸೆಂಬರ್ 13ರಂದು ಸಂಸತ್ತಿನಲ್ಲಿ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯಿಸಬೇಕು ಎಂದು ಉಭಯ ಸದನಗಳಲ್ಲಿ ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ.

ಈ ವಿಚಾರವಾಗಿ ಸದನದಲ್ಲಿ ಡಿಸೆಂಬರ್ 14ರಂದು ನಡೆದ ಕಲಾಪದ ವೇಳೆ ಪ್ರತಿಭಟಿಸಿದ್ದ ರಾಜ್ಯಸಭೆ ಮತ್ತು ಲೋಕಸಭೆಯ 14 ಸಂಸದರನ್ನು 'ಅನುಚಿತ ವರ್ತನೆ' ತೋರಿದ ಆರೋಪದಲ್ಲಿ ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ. ಅದೇ ರೀತಿ ಇಂದು, 78 ಸಂಸದರನ್ನು ಅಮಾನತು ಮಾಡಲಾಗಿದೆ.

ಇದರೊಂದಿಗೆ ಅಮಾನತುಗೊಂಡಿರುವ ಸಂಸದರ ಸಂಖ್ಯೆ 92ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.