ನವದೆಹಲಿ: ದೇಶದ ಉತ್ತರ ಭಾಗದ ಗಡಿ ಪ್ರದೇಶಗಳಲ್ಲಿ ವಾತಾವರಣ ಅಹಿತಕರವಾಗಿದ್ದು, ‘ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ’ ಎಂಬ ಪರಿಸ್ಥಿತಿ ಇದೆ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಹೇಳಿದ್ದಾರೆ.

ಇಲ್ಲಿನ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪೂರ್ವ ಲಡಾಖ್ನ ಗಡಿ ಭಾಗದಲ್ಲಿ ಚೀನಾದೊಂದಿಗಿನ ಸಂಘರ್ಷವನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ.

‘ಗಡಿಯಲ್ಲಿ ಉದ್ಭವವಾಗಿರುವ ಸಂಘರ್ಷದ ಸಮಯದಲ್ಲಿ ವಾಯುಪಡೆ ಸಹ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿಯಲ್ಲಿ ಎಂಥದ್ದೇ ಪರಿಸ್ಥಿತಿಯನ್ನು ಎದುರಿಸಲು ವಾಯುಪಡೆ ಸನ್ನದ್ಧವಾಗಿದೆ’ ಎಂದೂ ಹೇಳಿದರು.

‘ಸಿ–17 ಗ್ಲೋಬ್ಮಾಸ್ಟರ್ ಯುದ್ಧ ವಿಮಾನಗಳು, ಜತೆಗೆ, ರಫೇಲ್ ಯುದ್ಧ ವಿಮಾನಗಳು ಮತ್ತು ಚಿನೂಕ್ ಮತ್ತು ಅಪಾಚೆ ಹೆಲಿಕಾಪ್ಟರ್ಗಳ ಸೇರ್ಪಡೆಯಿಂದ ವಾಯಪಡೆಯ ಸಾಮರ್ಥ್ಯ ಹೆಚ್ಚಾಗಿದೆ‘ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.