ಜೈಪುರ: ರಾಜಸ್ಥಾನದ ಕಾಂಗ್ರೆಸ್ ನಾಯಕರ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಚುನಾವಣೆಯಲ್ಲಿ ಸೋಲುವುದು ಬಿಜೆಪಿಗೆ ಖಚಿತವಾಗಿದೆ ಎಂದು ಹೇಳಿದ್ದಾರೆ.

ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ಮಗ ವೈಭವ್ ಗೆಹಲೋತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಅಲ್ಲದೇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯ ತನಿಖೆಗೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ನ (ಪಿಸಿಸಿ) ಅಧ್ಯಕ್ಷ ಗೋವಿಂದ ಸಿಂಗ್ ಡೋಟಾಸ್ರ ಅವರ ಮೇಲೂ ದಾಳಿ ನಡೆಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿರುವ ಖರ್ಗೆ, ‘ರಾಜಸ್ಥಾನ ಚುನಾವಣೆಯಲ್ಲಿ ಸೋಲು ಖಚಿತವಾದ ಹಿನ್ನೆಲೆ ಬಿಜೆಪಿ ತನ್ನ ಕೊನೆಯ ದಾಳವನ್ನು ಪ್ರಯೋಗಿಸಿದೆ. ಛತ್ತೀಸ್ಗಢದ ನಂತರ ರಾಜಸ್ಥಾನದ ಕಾಂಗ್ರೆಸ್ ನಾಯಕರ ವಿರುದ್ಧ ಇ.ಡಿ ದಾಳಿ ನಡೆದಿದೆ’ ಎಂದು ಹೇಳಿದ್ದಾರೆ.

‘ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ತನಿಖಾ ಸಂಸ್ಥೆಗಳ ದುರುಪಯೋಗದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಬಿಜೆಪಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ’ ಎಂದರು.

ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
.ಪ್ರಶ್ನೆ ಪತ್ರಿಕೆ ಸೋರಿಕೆ: ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಇ.ಡಿ ದಾಳಿ.ಫೆಮಾ ಪ್ರಕರಣ: ರಾಜಸ್ಥಾನ ಸಿಎಂ ಅಶೋಕ್ ಗೆಹಲೋತ್ ಮಗನಿಗೆ ಇಡಿ ಸಮನ್ಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.