ಗುರುಗ್ರಾಮ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಕೋವಿಡ್ನಿಂದ ಬುಧವಾರ ಮುಂಜಾನೆ ನಿಧನರಾದರು

ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ಎರಡು ವಾರಗಳ ಹಿಂದೆ ಅವರಿಗೆ ಕೋವಿಡ್–19 ದೃಢಪಟ್ಟಿತ್ತು.

ಇದನ್ನೂ ಓದಿ: ಕುಶಾಗ್ರಮತಿ ರಾಜಕಾರಣಿ ಅಹ್ಮದ್ ಪಟೇಲ್ ನಡೆದು ಬಂದ ದಾರಿ...

ಎರಡು ವಾರಗಳಿಂದ ಇಲ್ಲಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಐದಾರು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ ಕುಟಂಬಕ್ಕೆ ಅಹ್ಮದ್ ಪಟೇಲ್ ಆಪ್ತರಾಗಿದ್ದರು. ಕಾಂಗ್ರೆಸ್ನ ರಾಷ್ಟ್ರೀಯ ರಾಜಕಾರಣದಲ್ಲಿ ಟ್ರಬಲ್ ಶೂಟರ್ ಎಂದೇ ಅವರು ಖ್ಯಾತಿಯಾಗಿದ್ದರು.

ಇದನ್ನೂ ಓದಿ:ಅಹ್ಮದ್ ಪಟೇಲ್ ನಿಧನ: ಮೋದಿ, ರಾಹುಲ್ ಸೇರಿ ಗಣ್ಯರ ಸಂತಾಪ

ಗುಜರಾತ್ನಿಂದ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿಯೂ ಅವರು ಕೆಲಸ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.