ಚಂಡೀಗಢ: ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ನ ಸಹಚರ ಪಪಲ್ಪ್ರೀತ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ನ ಹೋಶಿಯಾರ್ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಇದೇ ಡೇರಾದಲ್ಲಿ ಪಪಲ್ಪ್ರೀತ್ ಸಿಂಗ್ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದವು.

ಪಪಲ್ಪ್ರೀತ್ ಸಿಂಗ್ನ ಬಂಧನವಾಗಿದ್ದು ಕೆಲ ದಿನಗಳಲ್ಲಿ ಅಮೃತ್ಪಾಲ್ ಸಿಂಗ್ ಬಂಧನವಾಗಬಹುದು ಎಂದು ಪಂಜಾಬ್ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕರು ಜಲಂಧರ್, ಹೋಶಿಯಾರ್ಪುರ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದ ಡೇರಾಗಳಲ್ಲಿ ಆಶ್ರಯ ಪಡೆದಿದ್ದರು. ಅಮೃತಪಾಲ್ ಮತ್ತು ಪಪಲ್ಪ್ರೀತ್ ಸಿಂಗ್ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಮೃತಪಾಲ್ ಸಿಂಗ್ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.