ಜಲ್ನಾ: ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಎಂದೂ ಹೆಸರಾದ ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇನಲ್ಲಿ ಎರಡು ಕಾರುಗಳು ಡಿಕ್ಕಿ ಹೊಡೆದು ಏಳು ಜನರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಕಡವಂಚಿ ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ಬಲಿಯಾದವರು ಮುಂಬೈ ಮತ್ತು ಬುಲ್ಧಾನ ಜಿಲ್ಲೆಯ ಮಲಾಡ್ (ಪೂರ್ವ) ನಿವಾಸಿಗಳು. ಮೂವರು ಗಾಯಗೊಂಡ ವ್ಯಕ್ತಿಗಳಿಗೆ ಜಲ್ನಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಾಗ್ಪುರದಿಂದ ಮುಂಬೈಗೆ ಹೋಗುತ್ತಿದ್ದ ಮಲ್ಟಿ ಯುಟಿಲಿಟಿ ವೆಹಿಕಲ್ (ಎಂಯುವಿ) ಮತ್ತು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.