ಮುಂಬೈ: ನಗರದ ವಿವಿಧ ಭಾಗಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮಾರು ₹1.32 ಕೋಟಿ ಮೌಲ್ಯದ ಹೆರಾಯಿನ್ ಮತ್ತು ಮೆಫೆಡ್ರೋನ್ ಡ್ರಗ್ಸ್ ಅನ್ನು ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾದಕದ್ರವ್ಯ ವಿರೋಧಿ ದಳಕ್ಕೆ (ಎಎನ್‌ಸಿ) ದೊರೆತ ಮಾಹಿತಿ ಮೇರೆಗೆ ನಗರದ ಮಲಾಡ್, ವಸೈ ಮತ್ತು ಕುರ್ಲಾ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಮಲಾಡ್‌ನಲ್ಲಿ ನಡೆಸಿದ ಮೊದಲ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಸುಮಾರು ₹1.24 ಕೋಟಿ ಮೌಲ್ಯದ ಹೆರಾಯಿನ್ ಅನ್ನು ವಶಪಡಿಸಿಕೊಂಡರು ಹಾಗೂ ನಾಲ್ವರನ್ನು ಬಂಧಿಸಿದರು. ನಂತರದ ಶೋಧ ಕಾರ್ಯಾಚರಣೆಯಲ್ಲಿ ಇತರ ಮೂವರನ್ನು ಬಂಧಿಸಲಾಗಿದ್ದು, ಅವರಿಂದ ₹12 ಲಕ್ಷ ಮೌಲ್ಯದ ಮೆಫೆಡ್ರೋನ್ ಡ್ರಗ್ಸ್ ಅನ್ನು ವಶಪಡಿಸಿಕೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವರ್ಷದಲ್ಲಿ ಇಲ್ಲಿಯವರೆಗೆ ಸುಮಾರು 24 ಪ್ರಕರಣಗಳನ್ನು ಎಎನ್‌ಸಿ ದಾಖಲಿಸಿದ್ದು, 62 ಆರೋಪಿಗಳನ್ನು ಬಂಧಿಸಿದೆ. ಸುಮಾರು ₹31.6 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.