ವಿರುದುನಗರ (ತಮಿಳುನಾಡು): ಶಿವಕಾಶಿಯ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಏಳು ಕೋಣೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿಸಿದ್ದಾರೆ.
.ಶಿವಕಾಶಿ: ಮತ್ತೊಂದು ಪಟಾಕಿ ಘಟಕದಲ್ಲಿ ದುರಂತ, ಮೂವರು ಭಸ್ಮ.
ಘಟನೆ ವೇಳೆ ಖಾಸಗಿ ಪಟಾಕಿ ತಯಾರಿಕಾ ಘಟಕದಲ್ಲಿ ಸುಮಾರು 10 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಅಗ್ನಿ ಅವಘಡಕ್ಕೆ ಕಾರಣವೇನೆಂದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟಕವು ಪರವಾನಗಿಯನ್ನು ಪಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಅವಘಡದ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
. ಒಳನೋಟ: ‘ಶಿವಕಾಶಿ’ ಪಟಾಕಿ– ಸಾವಿನೊಂದಿಗೆ ಸೆಣಸು.
ರಾಷ್ಟ್ರಪತಿ ದ್ರೌಪದಿ ಮರ್ಮು, ‘ದುರಂತದ ಬಗ್ಗೆ ತಿಳಿದು ತೀವ್ರ ದುಃಖವಾಗಿತು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ’ ಎಂದು ‘ಎಕ್ಸ್’ನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.