ನವದೆಹಲಿ: ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಸೋಮವಾರ ಲೋಕಸಭೆಯಲ್ಲಿ ಹೇಳಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೆಂಟರ್ಗಳ ಕೇಂದ್ರವಾಗಿರುವ ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ತೆಗೆದುಕೊಂಡಿವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ಭಾರತದಲ್ಲಿ ಒಟ್ಟು ಆತ್ಮಹತ್ಯೆ ಪ್ರಕರಣಗಳಲ್ಲಿ ಶೇಕಡಾ 1.2 ರಷ್ಟು ಆತ್ಮಹತ್ಯೆ ಘಟನೆಗಳು ಪರೀಕ್ಷೆಗಳಲ್ಲಿನ ವೈಫಲ್ಯಕ್ಕೆ ಸಂಬಂಧಿಸಿವೆ ಎಂದೂ ಅವರು ಸದನಕ್ಕೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಬೆಂಬಲ ನೀಡಲು ಕೇಂದ್ರ ಶಿಕ್ಷಣ ಸಚಿವಾಲಯವು 'ಮನೋದರ್ಪಣ' ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ. ರಾಜಸ್ಥಾನ ಸರ್ಕಾರ ಕೂಡ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. 2022ರಲ್ಲಿ ಹಾಗೂ 2023ರಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಅದನ್ನೇ ಜಿಲ್ಲಾಡಳಿತ ಜಾರಿ ಮಾಡುತ್ತಿದೆ. ಅಲ್ಲದೇ 90 ಮಂದಿ ಮನಶಾಸ್ತ್ರ ಆಪ್ತಸಲಹೆಗಾರರನ್ನು, ಟೋಲ್ ಫ್ರೀ ಸಹಾಯವಾಣಿಯನ್ನೂ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
.ಕೋಟಾ: ನೀಟ್ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಯುವಕ 23 ದಿನಗಳ ಬಳಿಕ ಪತ್ತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.