ಹೈದರಾಬಾದ್: ತನ್ನ ಜೊತೆ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೀಡಾಗಿರುವ ಬಹುಭಾಷಾ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರನ್ನು ನಗರದ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜಾನಿ ಮಾಸ್ಟರ್ ನಿಜವಾದ ಹೆಸರು ಶೇಕ್ ಜಾನಿ ಬಾಷಾ ಎಂಬುದಾಗಿದ್ದು, ಸೈಬರಾಬಾದ್ ಪೊಲೀಸರು ಗುರುವಾರ ಗೋವಾದಲ್ಲಿ ಆತನನ್ನು ಬಂಧಿಸಿದ್ದರು. ಬಳಿಕ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ವಾರೆಂಟ್ ಮೇಲೆ ಹೈದರಾಬಾದ್‌ಗೆ ಕರೆತಂದಿದ್ದರು.

ಅವರನ್ನು ಇಂದು ಹೈದರಾಬಾದ್‌ಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿರುವ ಅವರನ್ನು ಚಂಚಲಗುಡಾ ಜೈಲಿಗೆ ಕಳುಹಿಸಲಾಗಿದೆ.

2020ರಂದು ಮುಂಬೈ ಪ್ರವಾಸದ ವೇಳೆ ಜಾನಿ ಮಾಸ್ಟರ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಬಳಿಕ, ನಿರಂತರವಾಗಿ ದೌರ್ಜನ್ಯ ಮುಂದುವರಿಸಿದರು. ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ನೃತ್ಯ ಕಲಾವಿದೆ ದೂರಿನಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 15ರಂದು ನರ್ಸಿಂಗಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376(2)(ಎನ್), 506, 323 ಅಡಿ ಪ್ರಕರಣ ದಾಖಲಾಗಿತ್ತು.

ಆಕೆಯ ಹೇಳಿಕೆ ದಾಖಲಿಸಿದ ಬಳಿಕ ಅತ್ಯಾಚಾರ ನಡೆದಾಗ ಆಕೆ ಅಪ್ರಾಪ್ತೆ ಎಂಬುದು ಬೆಳಕಿಗೆ ಬಂದಿದೆ. ಹೀಗಾಗಿ, ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯೂ ಪ್ರಕರಣ ದಾಖಲಿಸಲಾಗಿದೆ.
.Appu Dance ಖ್ಯಾತಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.