ಲಖನೌ: ಸಂಸ್ಥೆಗೆ ಸಂಬಂಧಪಡದ ಹೊರಗಿನ ವ್ಯಕ್ತಿಗಳು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಿಂದ ಆಕ್ರೋಶಗೊಂಡಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಭದ್ರತೆ ಒದಗಿಸಲು ಆಗ್ರಹಿಸಿದ್ದಾರೆ.

ಘಟನೆಯು ವಿದ್ಯಾರ್ಥಿನಿಲಯದ ಸಮೀಪದಲ್ಲೇ ನಡೆದಿದ್ದು, ಬೈಕ್ನಲ್ಲಿ ಬಂದ ಮೂವರು ಅಪರಿಚಿತರು ವಿದ್ಯಾರ್ಥಿನಿಯನ್ನು ಎಳೆದಾಡಿದ್ದಾರೆ. ಆಕೆಯ ವಸ್ತ್ರವನ್ನು ಹರಿದಿದ್ದಾರೆ ಮತ್ತು ಚುಂಬಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಘಟನೆ ನಂತರ ವಿದ್ಯಾರ್ಥಿಗಳು ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದರು. ಸಂಸ್ಥೆಯ ಆವರಣದೊಳಗೆ ಹೊರಗಿನವರು ಬರುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಜತೆಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಐಐಟಿ ಸಂಸ್ಥೆಗಳ ನಡುವೆ ಗೋಡೆ ಕಟ್ಟಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಯನ್ನು ಶಿಕ್ಷಣ ಮಂತ್ರಿಗೆ ಸಲ್ಲಿಸುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ. ಘಟನೆ ಕುರಿತು ವಿದ್ಯಾರ್ಥಿಗಳು ತಮ್ಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಕುಲಸಚವ, ‘ಎರಡೂ ಸಂಸ್ಥೆಗಳ ನಡುವೆ ಗೋಡೆ ನಿರ್ಮಾಣಕ್ಕೆ ಶಿಕ್ಷಣ ಮಂತ್ರಾಲಯ ಮತ್ತು ವಿಶ್ವವಿದ್ಯಾಲಯದ ಆಡಳಿತಮಂಡಳಿಯೊಂದಿಗೆ ವಿವಿಯು ವ್ಯವಹರಿಸಲಿದೆ. ಸದ್ಯಕ್ಕೆ ಕ್ಯಾಂಪಸ್ ಒಳಗೆ ಭದ್ರತೆ ಹೆಚ್ಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಕೂಡಲೇ ಅಳವಡಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.