ಮೀರಠ್ (ಉತ್ತರಪ್ರದೇಶ): 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಮೀರಠ್ನಲ್ಲಿ ಮದರಸಾದ ವ್ಯವಸ್ಥಾಪಕ ಮಕ್ಸೂದ್ ಹಾಗೂ ಶಿಕ್ಷಕ ಆದಿಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಈ ಇಬ್ಬರೂ ಮದರಸಾದಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆಕೆಯ ಕುಟುಂಬಸ್ಥರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರೂ ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ.

‘ಅ.29ರಂದು ಬಾಲಕಿಗೆ ಕಿರುಕುಳ ನೀಡಲಾಗಿದೆ. ಆಕೆಯನ್ನು ಕೊಲೆ ಮಾಡುವುದಾಗಿಯೂ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಇದಾದ ಬಳಿಕ ಹೆದರಿದ್ದ ಬಾಲಕಿ ಮದರಸಾಕ್ಕೆ ಹೋಗುವುದನ್ನು ನಿಲ್ಲಿಸಿದ್ದಳು’ ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.

ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರನ್ನು ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.