ತಿರುವನಂತಪುರ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ ಆರೋಪದಡಿಯಲ್ಲಿ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಫ್ಎಫ್ಐ) ಕನಿಷ್ಠ 12 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಕೇರಳ ರಾಜ್ಯಪಾಲರ ಬೆಂಗಾವಲು ಪಡೆ ಕೊಲ್ಲಂ ಜಿಲ್ಲೆಯಿಂದ ರಾಜಧಾನಿ ತಿರುವನಂತಪುರಕ್ಕೆ ಸಂಚರಿಸುತ್ತಿದ್ದಾಗ ಮಂಗಳಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನಲ್ಲಿ ರಾಜ್ಯಪಾಲ ಆರಿಫ್ ವಿರುದ್ಧ ಎಸ್ಎಫ್ಐ ಕಾರ್ಯಕರ್ತರು ಸೋಮವಾರ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಇದರಿಂದ ಕುಪಿತಗೊಂಡ ಆರಿಫ್ ತಮ್ಮ ಕಾರಿನಿಂದ ಇಳಿದು ಪ್ರತಿಭಟನಾಕಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಉನ್ನತ ಶಿಕ್ಷಣ ಕ್ಷೇತ್ರವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕೇಸರಿಮಯಗೊಳಿಸಿದ್ದಾರೆ ಎಂದು ಆರೋಪಿಸಿ ಎಸ್ಎಫ್ಐ ಸಂಘಟನೆ, 'ಗೋ ಬ್ಯಾಕ್' ಘೋಷಣೆಯೊಂದಿಗೆ ರಾಜ್ಯಪಾಲರ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.