ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉನ್ನತ ಶಿಕ್ಷಣ ಕ್ಷೇತ್ರವನ್ನು ಕೇಸರಿಮಯಗೊಳಿಸಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್ಎಫ್ಐ) ಕಾರ್ಯಕರ್ತರು ಬುಧವಾರ ರಾಜಭವನಕ್ಕೆ ನಡೆಸಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದೆ.

ರಾಜ್ಯಪಾಲರು ಕೈಗೊಂಡಿರುವ ಕ್ರಮಗಳ ವಿರುದ್ಧ ಎಡಪಕ್ಷವು ರಾಜ್ಯಾದ್ಯಂತ ಶೈಕ್ಷಣಿಕ ಮುಷ್ಕರವನ್ನು ಘೋಷಿಸಿದ್ದು, ಇದರ ಅಂಗವಾಗಿ ಎಸ್‌ಎಫ್ಐ ರಾಜಭವನಕ್ಕೆ ಮೆರವಣಿಗೆ ನಡೆಸಿತ್ತು. ಹೆಚ್ಚಿನ ಸಂಖ್ಯೆಯಲ್ಲಿದ್ದ ಎಸ್‌ಎಫ್‌ಐ ಕಾರ್ಯಕರ್ತರು ರಾಜಭವನ ರಸ್ತೆಯಲ್ಲಿ ಹಾಕಲಾಗಿದ್ದ ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಿ ಮುಂದೆ ಸಾಗಿದ್ದರು.

ಪೊಲೀಸರು ಎಷ್ಟೇ ತಡೆಯಲು ಪ್ರಯತ್ನಿಸಿದರೂ, ಕೆಲವು ಪ್ರತಿಭಟನಾಕಾರರು ರಾಜಭವನದ ಮುಖ್ಯ ದ್ವಾರದ ಬಳಿ ಬಂದು ರಾಜ್ಯಪಾಲ ಖಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯು ಹಿಂಸಾರೂಪ ಪಡೆಯುತ್ತಿರುವಂತೆಯೇ ಪೊಲೀಸರು ಗುಂಪನ್ನು ಚದುರಿಸಲು ಜಲಫಿರಂಗಿ ಬಳಸಿದರು. ನಂತರ ಪ್ರತಿಭಟನಾಕಾರರನ್ನು ಬಂಧಿಸಿ ಆ ಪ್ರದೇಶದಿಂದ ಅವರನ್ನು ಕರೆದೊಯ್ಯಲಾಯಿತು.

ರಾಜ್ಯಾದ್ಯಂತವೂ ವಿವಿಧ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಎಸ್‌ಎಫ್‌ಐ ಕಾರ್ಯಕರ್ತರು ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.