ನವದೆಹಲಿ: ಛತ್ತೀಸಗಢದ ರಾಯ್‌ಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಶನಿವಾರದಂದು (ಆ. 24) ನಕ್ಸಲ್ ಬಾಧಿತ ಪ್ರದೇಶಗಳ ಅಂತರರಾಜ್ಯ ಸಮನ್ವಯ ಸಾಧಿಸಲು ಉನ್ನತ ಮಟ್ಟದ ಸಭೆ ನಡೆಯಲಿದೆ.

ಅದೇ ದಿನ ಮತ್ತೊಂದು ಪ್ರತ್ಯೇಕ ಸಭೆಯಲ್ಲಿ ಅಮಿತ್ ಶಾ ಅವರು ರಾಜ್ಯದಲ್ಲಿ ನಕ್ಸಲ್ ಬಾಧಿತ ಪ್ರದೇಶಗಳ ಭದ್ರತೆ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸಗಢ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಮತ್ತು ಕೇಂದ್ರ ಸರ್ಕಾರದ ಉನ್ನತ ಭದ್ರತಾ ಅಧಿಕಾರಿಗಳು ಅಂತರರಾಜ್ಯ ಸಮನ್ವಯ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ರಾಜ್ಯಕ್ಕೆ ಮೂರು ದಿನಗಳ ಪ್ರವಾಸದಲ್ಲಿ, ಅಮಿತ್ ಶಾ ಅವರು ರಾಯ್‌ಪುರದ ಮಹಾಪ್ರಭು ವಲ್ಲಭಾಚಾರ್ಯ ಆಶ್ರಮಕ್ಕೂ ಭೇಟಿ ನೀಡಲಿದ್ದಾರೆ. ರಾಜಧಾನಿಯಲ್ಲಿ ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳದ (ಎನ್‌ಸಿಬಿ) ನಿರ್ವಹಣೆಯನ್ನು ಪರಿಶೀಲಿಸಲಿದ್ದಾರೆ.

ಅಮಿತ್ ಶಾ ಈ ಹಿಂದೆ ನೀಡಿದ್ದ ಹೇಳಿಕೆಯಲ್ಲಿ, ರಾಜ್ಯದಲ್ಲಿ ಕಳೆದ ಐದು ತಿಂಗಳಲ್ಲಿ 125 ನಕ್ಸಲರ ಹತ್ಯೆಯಾಗಿದ್ದು, 352 ಮಂದಿಯನ್ನು ಬಂಧಿಸಲಾಗಿದೆ. 175 ಮಂದಿ ಶರಣಾಗಿದ್ದರು ಎಂದು ಮಾಹಿತಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.