ನವದೆಹಲಿ: ಸಹಜೀವನ ಸಂಗಾತಿಯಿಂದಲೇ ಹತ್ಯೆಗೊಳಗಾದ ಶ್ರದ್ಧಾ ವಾಲ್ಕರ್ ಅವರ ಅಂತ್ಯಸಂಸ್ಕಾರ ನೆರವೇರಿಸಲು ಕಳೇಬರದ ಉಳಿದ ಭಾಗಗಳನ್ನು ನೀಡುವಂತೆ ಕೋರಿ ಶ್ರದ್ಧಾ ತಂದೆ ವಿಕಾಸ್ ಮದನ್ ವಾಲ್ಕರ್ ಶನಿವಾರ ಇಲ್ಲಿನ ಕೋರ್ಟ್ ಮೊರೆ ಹೋಗಿದ್ದಾರೆ.

ಸಂಪ್ರದಾಯದ ಪ್ರಕಾರ ಮೃತಪಟ್ಟ ಒಂದು ವರ್ಷದ ಒಳಗೆ ಅಂತ್ಯಸಂಸ್ಕಾರ ನೆರವೇರಿಸಬೇಕು. ಹಿಂದೂ ಕ್ಯಾಲೆಂಡರ್ ಪ್ರಕಾರ ಮೇ 8ರ ಒಳಗಾಗಿ ಅಂತಿಮ ವಿಧಿವಿಧಾನ ನೆರವೇರಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ವೇಳೆ ಏ.29ರಂದು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ದೆಹಲಿ ಪೊಲೀಸರು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಖುರಾನಾ ಕಕ್ಕರ್ ಅವರಿಗೆ ತಿಳಿಸಿದ್ದಾರೆ.

ಕಳೆದ ವರ್ಷ ಮೇ 18ರಂದು ಸಹಜೀವನ ಸಂಗಾತಿ ಅಫ್ತಾಬ್ ಅಮೀನ್ ಪೂನಾವಾಲ ಚಾಕುವಿನಿಂದ ಇರಿದು ಶ್ರದ್ಧಾರನ್ನು ಕೊಲೆ ಮಾಡಿದ್ದ. ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ನಂತರ ನಗರದಾದ್ಯಂತ ಹಲವು ದಿನಗಳ ಕಾಲ ಎಸೆದಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.