ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ಆರೋಪಿ ಪೀಟರ್ ಮುಖರ್ಜಿಗೆ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ಇಲ್ಲಿನ ಜೆ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇಂದ್ರ ಮುಂಬೈನ ಅರ್ಥೂರ್ ರೋಡ್ ಜೈಲಿನಲ್ಲಿರುವ ಮುಖರ್ಜಿಗೆ ಕೆಲ ದಿನಗಳಿಂದ ಎದೆ ನೋವು ಕಾಣಿಸಿಕೊಂಡಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಸಂಜೆ ನೋವು ಹೆಚ್ಚಾದ ಕಾರಣ ವೈದ್ಯರು ತಪಾಸಣೆ ನಡೆಸಿದ್ದು ಬಳಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಡಾ.ಸಂಜಯ್ ಸೂರ್ಸೆ ತಿಳಿಸಿದ್ದಾರೆ.

2012ರಲ್ಲಿ ನಡೆದಿದ್ದ ಇಂದ್ರಾಣಿ ಮುಖರ್ಜಿ ಮಗಳು ಶೀನಾ ಬೋರಾ ಕೊಲೆ ಪ್ರಕರಣ 2015ರಲ್ಲಿ ಬಯಲಿಗೆ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.