ನವದೆಹಲಿ: ಸಾಮಾಜಿಕ ಹೋರಾಟಗಾರ್ತಿ,ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು) ವಿದ್ಯಾರ್ಥಿ ಸಂಘಟನೆ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ವಿರುದ್ಧ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಸಂವಿಧಾನದ 370ನೇ ವಿಧಿ(ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ) ರದ್ದತಿಯ ನಂತರದಲ್ಲಿ ಕಾಶ್ಮೀರದ ಪರಿಸ್ಥಿತಿ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವುದಾಗಿ ಶೆಹ್ಲಾ ರಶೀದ್ ವಿರುದ್ಧ ಆರೋಪಿಸಲಾಗಿದೆ.

ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ವಕೀಲರೊಬ್ಬರು ನೀಡಿರುವ ದೂರಿನನ್ವಯ ಬುಧವಾರ ಶೆಹ್ಲಾ ರಶೀದ್ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಸಮಗ್ರ ಮಾಹಿತಿ

’ಐಪಿಸಿ ಸೆಕ್ಷನ್ 124–ಎ(ರಾಷ್ಟ್ರದ್ರೋಹ),153 (ದೊಂಬಿ ಎಬ್ಬಿಸುವ ಸಲುವಾಗಿ ಹೊಣೆಗಾರಿಕೆ ಮರೆತು ಪ್ರಚೋದನೆ ನೀಡುವುದು), ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈಷಮ್ಯವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯ ನಿರ್ವಹಣೆಯಲ್ಲಿ ಪೂರ್ವಗ್ರಹಪೀಡಿತವಾಗಿ ವರ್ತಿಸುವುದು) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ‘ ಎಂದು ತಿಳಿಸಿದ್ದಾರೆ.

ಆಗಸ್ಟ್ 18 ಹಾಗೂ ಅದರ ಹಿಂದು ಮುಂದಿನ ದಿನಗಳಲ್ಲಿ ಮಾಡಿರುವ ಟ್ವೀಟ್ಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ಘಟಕಕ್ಕೆವರ್ಗಾಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.