ಮುಂಬೈ: ಅನಾರೋಗ್ಯಕ್ಕೀಡಾಗಿದ್ದ ಶಿವಸೇನಾ ಶಾಸಕ ಅನಿಲ್ ಬಾಬರ್ ಮೃತಪಟ್ಟಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಬಾಬರ್ ಅವರು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರ ಶಿವಸೇನಾ ಬಣದಲ್ಲಿ ಗುರುತಿಸಿಕೊಂಡಿದ್ದರು. ಸಾಂಗ್ಲಿ ಜಿಲ್ಲೆಯ ಖಾನಾಪುರದಿಂದ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

1990 ಮತ್ತು 1999ರ ವಿಧಾನಸಭೆ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದ ಅವರು, 2014 ಮತ್ತು 2019ರಲ್ಲಿ ಅವಿಭಜಿತ ಶಿವಸೇನಾ ಪಕ್ಷದಿಂದ ಆಯ್ಕೆಯಾಗಿದ್ದರು.

ಬಾಬರ್ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು ಮಾಡಿರುವ ಮುಖ್ಯಮಂತ್ರಿ ಏಕನಾಥ್ ಶಿಂದೆ, ಬಾಬರ್ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.