ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಕಗ್ಗಂಟ್ಟು ಮುಂದುವರಿದಿದ್ದು, ಏಕೈಕ ಬಹುದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರ್ಕಾರ ರಚಿಸುವ ಹಕ್ಕಿದೆ ಅದರಂತೆ ಸರ್ಕಾರ ರಚನೆಗೆ ಮುಂದಾಗಲಿ 15 ದಿನಗಳಷ್ಟೇ ಏಕೆ ಒಂದು ತಿಂಗಳ ಸಮಯ ತೆಗೆದುಕೊಂಡು ಬಹುಮತ ಸಾಬೀತು ಪಡಿಸಲಿ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕಿಡಿಕಾರಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಡಣವೀಸ್ ಸರ್ಕಾರ ಅವಧಿ ಮುಗಿದ ಬಳಿಕ ಮಹಾರಾಷ್ಟ್ರದ ಅಧಿಕಾರವನ್ನು ಉಳಿಸಿಕೊಳ್ಳಲು ಉಸ್ತುವಾರಿ ನೆಪದಲ್ಲಿ ಯಾವುದೇ ಪ್ರಯತ್ನ ನಡೆಸುವುದು ಸರಿಯಲ್ಲ ಎಂದಿದ್ದಾರೆ.

ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಮತ್ತು ಅಧಿಕಾರವನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳಲು ಯಾವುದೇ ಪ್ರಯತ್ನ ಮಾಡಿದರೆ ಅದು ಸರಿಯಲ್ಲ. ಮುಖ್ಯಮಂತ್ರಿ ಯಾರೇ ಆಗಿದ್ದರೂ ಕೂಡ ಸಂವಿಧಾನದ ಪ್ರಕಾರ ರಾಜೀನಾಮೆ ನೀಡಬೇಕು ಎಂದು ತಿಳಿಸಿದರು.

ಸರ್ಕಾರದ ಅವಧಿ ಮುಗಿದ ಬಳಿಕ ಹೊಸ ಸರ್ಕಾರ ರಚನೆಯಾಗುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ದೇವೇಂದ್ರ ಫಡಣವೀಸ್ ಅವರನ್ನು ರಾಜ್ಯಪಾಲರು ಕೇಳುತ್ತಾರೆ. ಇದೇ ಅವಕಾಶವನ್ನು ಬಳಸಿಕೊಂಡು ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಮುಂದಾಗಿದೆ ಎಂಬ ವರದಿಗಳ ಬಳಿಕ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಎರಡೂವರೆ ವರ್ಷದ ಅವಧಿಗೆ ಮುಖ್ಯಮಂತ್ರಿ ಹುದ್ದೆಯನ್ನು ಶಿವಸೇನಾಗೆ ಬಿಟ್ಟುಕೊಡುವುದಾಗಿ ಲಿಖಿತ ಭರವಸೆ ನೀಡುವುದಾದರೆ ಮಾತ್ರ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ವಿಚಾರದಲ್ಲಿ ಮಧ್ಯೆ ಪ್ರವೇಶಿಸಲಿ. ನಿತಿನ್ ಗಡ್ಕರಿ ಅವರು ಮುಂಬೈ ನಿವಾಸಿ, ಇಲ್ಲಿಗೆ ಬರಲು ಅವರಿಗೆ ಅನುಮತಿ ಅಗತ್ಯವಿಲ್ಲ. ಲಿಖಿತ ಭರವಸೆಗೆ ಅವರು ಒಪ್ಪಿದರೆ ಈ ವಿಚಾರವನ್ನು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ತಿಳಿಸುತ್ತೇನೆ ಎಂದರು.

ಬಿಜೆಪಿ ಮತ್ತು ಶಿವಸೇನಾ ನಡುವೆ ಮೂರನೇ ವ್ಯಕ್ತಿ ಮಧ್ಯಸ್ಥಿಕೆ ವಹಿಸುವ ಅಗತ್ಯವಿಲ್ಲ. ಶಾಸಕರ ಕುದುರೆ ವ್ಯಾಪಾರಕ್ಕೆ ಹೆದರಿ ಕಾಂಗ್ರೆಸ್ನ 44 ಶಾಸಕರನ್ನು ಜೈಪುರಕ್ಕೆ ಕಳುಹಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ಕರ್ನಾಟಕದ ಮಾದರಿಯು ಇಲ್ಲಿ ಮತ್ತೆ ಪುನರಾವರ್ತನೆಯಾಗುತ್ತಿದೆಯೇ? ಆದರೆ ಮಹಾರಾಷ್ಟ್ರದಲ್ಲಿ ಇದು ಸಾಧ್ಯವಾಗುವುದಿಲ್ಲ. ಇಲ್ಲೆಲ್ಲ ನಾವು ಒಬ್ಬರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.