ಮುಂಬೈ:ಶಿವಸೇನಾ ನಾಯಕರಿಗೆ ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ನಾಯಕರ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ ಎಂದು ಪಕ್ಷದ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಸೇನಾ ಕಳೆದವಾರ ಎನ್ಡಿಎ ಮೈತ್ರಿಕೂಟ ತ್ಯಜಿಸಿತ್ತು. ಇದೇ 18ರಿಂದ (ಸೋಮವಾರ) ಸಂಸತ್ನ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ನಡೆಯುವ ಎನ್ಡಿಎ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಶಿವಸೇನಾ ಈಗಾಗಲೇ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಸೋಮವಾರದಿಂದ ಸಂಸತ್ ಚಳಿಗಾಲದ ಅಧಿವೇಶನ

ನವೆಂಬರ್ 17ಕ್ಕೆ ಎನ್ಡಿಎ ಸಭೆ ನಡೆಯುವ ಬಗ್ಗೆ ಮಾಹಿತಿ ದೊರೆತಿದೆ. ಆ ಸಭೆಯಲ್ಲಿ ಭಾಗವಹಿಸದಿರಲು ನಾವು ಈಗಾಗಲೇ ತೀರ್ಮಾನಿಸಿದ್ದೇವೆ. ನಮ್ಮ ಸಚಿವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಗಿದೆ ಎಂದು ರಾವತ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.