ಮುಂಬೈ: ಮಾಜಿ ಸಚಿವ ಹಾಗೂ ಎನ್ಸಿಪಿ (ಅಜಿತ್ ಪವಾರ್ ಬಣ) ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಶೂಟರ್ ಶಿವಕುಮಾರ್ ಹಾಗೂ ಇತರ ನಾಲ್ವರು ಆರೋಪಿಗಳನ್ನು ಉತ್ತರ ಪ್ರದೇಶದಲ್ಲಿ ಭಾನುವಾರ ಬಂಧಿಸಿದ್ದಾರೆ.

ಅನುರಾಗ್ ಕಶ್ಯಪ್, ಜ್ಞಾನಪ್ರಕಾಶ ತ್ರಿಪಾಠಿ, ಆಕಾಶ್ ಶ್ರೀವಾಸ್ತವ ಹಾಗೂ ಅಖಿಲೇಂದ್ರ ಪ್ರತಾಪ್ ಸಿಂಗ್ ಬಂಧಿತ ಇತರರು.

ಉತ್ತರ ಪ್ರದೇಶದ ಎಸ್ಟಿಎಫ್ ಹಾಗೂ ಮುಂಬೈ ಕ್ರೈಂ ಬ್ರ್ಯಾಂಚ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ಬಹರಾಯಿಚ್ ಜಿಲ್ಲೆ ನಾನ್ಪಾರಾದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಉತ್ತರ ಪ್ರದೇಶ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ/ಎಸ್ಟಿಎಫ್) ಅಮಿತಾಭ್ ಯಶ್ ಲಖನೌದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಂಧಿತ ನಾಲ್ವರು ಶಿವಕುಮಾರ್ಗೆ ಆಶ್ರಯ ನೀಡಿದ್ದರು. ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದ ಆತನಿಗೆ ನೆರವು ನೀಡಿದ್ದರು ಎಂದು ಎಡಿಜಿಪಿ ಯಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.