ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಬಿಸ್ರಾಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆರು ಢಾಬಾಗಳು ಸೇರಿದಂತೆ ಎರಡು ಅಂಗಡಿಗಳಲ್ಲಿ ಬೆಂಕಿ ಹೊತ್ತಿಕೊಂಡು ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ತು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

‘ಗೌ ಸಿಟಿ ಸರ್ಕಲ್‌ನಲ್ಲಿರುವ ಆರು ಢಾಬಾಗಳು ಸೇರಿದಂತೆ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಬಂದ ಕೂಡಲೇ ಹತ್ತು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ’ ಎಂದು ಸಿಎಫ್‌ಒ ಪ್ರದೀಪ್ ಕುಮಾರ್ ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.