ಬೆಂಗಳೂರು: ಸಿಬಿಎಸ್ಇ ಪಠ್ಯಕ್ರಮದಿಂದ ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕೈಬಿಟ್ಟಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಅವರು, 'ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಸಿಬಿಎಸ್ಐ 11ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ. ಬಿಜೆಪಿಯು ಈ ತತ್ವಗಳನ್ನು ನಂಬುವುದಿಲ್ಲ ಮತ್ತು ತನ್ನ ಹಿಂದಿನ ನಡವಳಿಕೆಗಳನ್ನು ಮೌಲ್ಯೀಕರಿಸುತ್ತದೆ ಎಂಬುದಾಗಿ ಇದು ವಿವರಿಸುತ್ತದೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿರುವ ಅವರು, 'ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಪೌರತ್ವ, ಜಾತ್ಯತೀತತೆ ಮತ್ತು ಸಂಯುಕ್ತ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೈಬಿಟ್ಟಿರುವ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಒಂದು ಪೀಳಿಗೆಯ ವಿದ್ಯಾರ್ಥಿಗಳನ್ನು ಈ ನಿರ್ಧಾರ ವಂಚಿಸಲಿದೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.