ನವದೆಹಲಿ: 2022ರ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಚೇತರಿಕೆ ಹಾದಿಯಲ್ಲಿದ್ದ ಪಂಜಾಬ್ ಕಾಂಗ್ರೆಸ್ನಲ್ಲಿ ಮತ್ತೆ ಒಳಬೇಗುದಿ ಆರಂಭವಾಗಿದೆ. ಮತ್ತೊಮ್ಮೆ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಮತ್ತು ರಾಜ್ಯ ನಾಯಕತ್ವದ ಮಧ್ಯೆ ಅಸಮಾಧಾನ ಹೊಗೆಯಾಡುತ್ತಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳದಂತೆ ಪಕ್ಷದ ಹೈಕಮಾಂಡ್ ಜೊತೆ ತಿಕ್ಕಾಟ ನಡೆಸುತ್ತಿರುವ ಸಂದರ್ಭದಲ್ಲಿಯೇ ಈ ಬಿರುಕು ಮೂಡಿದೆ.

ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವುದಕ್ಕೆ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಅಮರಿಂದರ್ ಸಿಂಗ್ ವಾರಿಂಗ್ ಮತ್ತು ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ವಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ, ಸಿಧು ತಮ್ಮ ಪ್ರವೃತ್ತಿ ಮುಂದುವರಿಸಿರುವುದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

ಈ ಮಧ್ಯೆ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ಗುಂಪು, ಸಿಧು ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಜಂಟಿ ಹೇಳಿಕೆ ಬಿಡುಗಡೆ ಮಾಡಿದೆ.

ಕಳೆದ ಒಂದು ವರ್ಷದಿಂದಲೂ ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿಧು ಮತ್ತು ಪಕ್ಷದ ನಾಯಕರೊಂದಿಗೆ ಅಸಮಾಧಾನ ಇದೆ. ಇದು ಮುಖ್ಯಮಂತ್ರಿಯಾಗಿದ್ದ ಅಮರಿಂದರ್ ಸಿಂಗ್ ಅವರ ಪದಚ್ಯುತಿಗೂ ಕಾರಣವಾಗಿತ್ತು. ನಂತರ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ವಿಚಾರವಾಗಿ ಕೇಂದ್ರ ನಾಯಕತ್ವದೊಂದಿಗೂ ಸಿಧು ಬೇಸರ ಹೊಂದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲು ಅನುಭವಿಸಿದ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಆಗಿನಿಂದಲೂ ಪಕ್ಷದ ರಾಜ್ಯ ನಾಯಕರೊಂದಿಗೆ ವೈಮನಸ್ಸು ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.