ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಇದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಎದ್ದಿರುವ ಆಂತರಿಕ ಭಿನ್ನಾಭಿಪ್ರಾಯವನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಗಡ್ಕರಿ ಪತ್ರವನ್ನು ಉಲ್ಲೇಖಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ‘ಹಣಕಾಸು ಸಚಿವೆಗೆ ನಿತಿನ್ ಗಡ್ಕರಿ ಅವರು ಬರೆದಿರುವ ಪತ್ರವು ಜೈವಿಕವಲ್ಲದ ಪ್ರಧಾನಿ ವಿರುದ್ಧ ಎದ್ದಿರುವ ಆತಂರಿಕ ಭಿನ್ನಾಭಿಪ್ರಾಯದ ಸ್ಪಷ್ಟ ಸೂಚನೆಯಾಗಿದೆ’ ಎಂದು ಹೇಳಿದರು.

ಜೀವ ವಿಮೆ ಮತ್ತು ವೈದ್ಯಕೀಯ ವಿಮೆ ಕಂತುಗಳ ಮೇಲೆ ವಿಧಿಸಿರುವ ಶೇ 18ರಷ್ಟು ಜಿಎಸ್ಟಿಯನ್ನು ತೆಗೆದು ಹಾಕುವಂತೆ ನಿತಿನ್ ಗಡ್ಕರಿ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದರು.

‘ಜೀವ ವಿಮೆ ಮತ್ತು ವೈದ್ಯಕೀಯ ವಿಮಾ ಕಂತುಗಳ ಮೇಲೆ ವಿಧಿಸುತ್ತಿರುವ ಜಿಎಸ್ಟಿಯು ಈ ವಲಯದ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿದೆ. ಇದು ಹಿರಿಯ ನಾಗರಿಕೆ ಹೊರೆಯಾಗಿ ಪರಿಣಮಿಸಿದೆ’ ಎಂದು ಪತ್ರದಲ್ಲಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.