ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ನ ನಲ್ಲ ಸೊಪಾರ ಪಟ್ಟಣದಲ್ಲಿ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಆರು ಸರ್ಕಾರಿ ಬಸ್ಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 9.30ರ ಸುಮಾರಿಗೆ ಸನ್ಶೈನ್ ಗಾರ್ಡನ್ ಪ್ರದೇಶದ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.

ವಸಾಯಿ–ವಿರಾರ್ ಮಹಾನಗರ ಪಾಲಿಕೆಯ (ವಿವಿಎಂಸಿ) ಕೆಲವು ಬಸ್ಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಲಾಗಿತ್ತು. ಅವುಗಳಲ್ಲಿ ಆರು ಬಸ್ಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ ಎಂದು ಅವರು ಹೇಳಿದ್ದಾರೆ.

ಅಗ್ನಿಶಾಮಕ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿವೆ. ಅವಘಡಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.