ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಉಜನಿ ಜಲಾಶಯದ ಹಿನ್ನೀರಿನಲ್ಲಿ ದೋಣಿ ಮುಳುಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಾಶಿ ಮತ್ತು ಭುಗಾವ್ ಗ್ರಾಮಗಳ ನಡುವೆ ದೋಣಿ ಸಂಚರಿಸುತ್ತಿತ್ತು. ಮಂಗಳವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಏಳು ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿದ್ದ ಏಳು ಜನರ ಪೈಕಿ ಸಹಾಯಕ ಪೊಲೀಸ್ ಇನ್‌ಸ್ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು ಈಜಿ ಪಾರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಪುರುಷರು, ಇಬ್ಬರು ಮಹಿಳೆಯರು ಕೊನೆಯುಸಿರೆಳೆದಿದ್ದಾರೆ ಎಂದು ಇಂದಾಪುರ ತಹಶೀಲ್ದಾರ್ ಶ್ರೀಕಾಂತ್ ಪಾಟೀಲ್ ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತದ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.