ಗೊಂಡಿಯಾ: ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿಯ ಮೇಲೆ ನಿರ್ಮಿಸಲಾಗಿದ್ದ ಕಿರು ಸೇತುವೆಯೊಂದು ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಹೀಗಾಗಿ, ಈ ಮಾರ್ಗವಾಗಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಾಗುತ್ತಿವೆ. ಜಿಲ್ಲೆಯ ಅರ್ಜುನಿ ಮೊರ್ಗಾಂವ್ ತಾಲೂಕಿನ ನವೆಗಾಂವ್– ಕೊಹ್ಲಾಗಾಂವ್– ಕಿಶೋರಿ ರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.

ಈ ಸೇತುವೆಯನ್ನು 50 ವರ್ಷಗಳ ಹಿಂದೆಯೇ ನಿರ್ಮಿಸಲಾಗಿತ್ತು. ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಈಚೆಗೆ ಸುರಿದ ಭಾರಿ ಮಳೆಯಿಂದಲೇ ಸೇತುವೆ ಬಿದ್ದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.