ನವದೆಹಲಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹಾಥರಸ್ ಭೇಟಿ ರಾಜಕೀಯ ಪ್ರೇರಿತ. ಸಂತ್ರಸ್ತೆಯ ಕುಟುಂಬದವರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶದಿಂದ ಕೂಡಿದ್ದಲ್ಲ’ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನ ತಂತ್ರಗಳ ಬಗ್ಗೆ ಜನರಿಗೆ ತಿಳಿದಿದೆ. ಅದಕ್ಕಾಗಿಯೇ 2019ರಲ್ಲಿ ಬಿಜೆಪಿಗೆ ಐತಿಹಾಸಿಕ ಜಯ ಒದಗಿಸಿಕೊಟ್ಟಿದ್ದಾರೆ. ಅವರು (ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ) ಹಾಥರಸ್‌ಗೆ ಭೇಟಿ ನೀಡಿರುವುದು ರಾಜಕೀಯಕ್ಕಷ್ಟೇ ವಿನಃ ಸಂತ್ರಸ್ತೆಗೆ ನ್ಯಾಯ ಒದಗಿಸುವುದಕ್ಕಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ: 15 ವರ್ಷದ ಬಾಲಕಿ ಮೇಲೆ ದೌರ್ಜನ್ಯ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಗುರುವಾರ ಹಾಥರಸ್‌ಗೆ ತೆರಳಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಮುಂದಾಗಿದ್ದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆದಿದ್ದರು. ರಾಹುಲ್, ಪ್ರಿಯಾಂಕಾ ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭ ಸಾರ್ವಜನಿಕರ ಓಡಾಟಕ್ಕಿರುವ ನಿರ್ಬಂಧ ಉಲ್ಲಂಘಿಸಿದ್ದಕ್ಕಾಗಿ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ಹಾಥರಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯು ಸೆಪ್ಟೆಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಅತ್ಯಾಚಾರ ಪ್ರಕರಣ: ಹಾಥರಸ್‌ಗೆ ಭೇಟಿ ನೀಡಲಿರುವ ರಾಹುಲ್, ಪ್ರಿಯಾಂಕಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.