ನವದೆಹಲಿ: ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಅವರಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ಸೋಮವಾರ ಸಿಬಿಐಗೆ ಹಸ್ತಾಂತರಿಸಿದೆ.

ಸಚಿವಾಲಯದ ಈ ನಿರ್ಧಾರವನ್ನು ಸೋನಾಲಿ ಕುಟುಂಬವು ಸ್ವಾಗತಿಸಿದೆ. ಸೋನಾಲಿ ಅವರ ಸಹೋದರ ರಿಂಕು ಫೋಗಾಟ್, ‘ನಮ್ಮ ಕುಟುಂಬವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆರಂಭದಿಂದಲೂ ಒತ್ತಾಯಿಸಿತ್ತು’ ಎಂದು ಪ್ರತಿಕ್ರಿಯಿಸಿದ್ದಾರೆ.

ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೋರಿ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಚಿವಾಲಯವು ತನಿಖೆಯನ್ನು ಸಿಬಿಐಗೆ ನೀಡಿದೆ.

ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್ ಅವರು, ‘ಗೋವಾ ಪೊಲೀಸರು ಪ್ರಕರಣದ ಕುರಿತು ಅತ್ಯುತ್ತಮವಾಗಿ ತನಿಖೆ ಮಾಡಿದ್ದಾರೆ. ಕೆಲವು ಸುಳಿವುಗಳನ್ನೂ ಪತ್ತೆ ಮಾಡಿದ್ದಾರೆ. ಆದರೆ, ಸೋನಾಲಿ ಅವರ ಮಗಳ ಬೇಡಿಕೆ ಹಾಗೂ ಹರಿಯಾಣದ ಜನತೆಯ ಒತ್ತಾಯದ ಮೇರೆಗೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲು ನಾವು ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದೇವೆ’ ಎಂದು ತಿಳಿಸಿದ್ದಾರೆ.

ಹರಿಯಾಣದ ಹಿಸಾರ್ನ ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಅವರು ಆಗಸ್ಟ್ನಲ್ಲಿ ಗೋವಾದಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಸೋನಾಲಿ ಅವರ ಇಬ್ಬರು ಸಹಾಯಕರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಿಸಾರ್ನಲ್ಲಿ ಭಾನುವಾರ ನಡೆದಿದ್ದ, ‘ಖಾಪ್ ಮಹಾಪಂಚಾಯತ್’ ಸಭೆಯು ಸೆಪ್ಟೆಂಬರ್ 23ರೊಳಗೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡುವಂತೆ ಸರ್ಕಾರಕ್ಕೆ ಗಡುವು ನೀಡಿತ್ತು. ಸಿಬಿಐ ತನಿಖೆಗೆ ವಹಿಸದಿದ್ದಲ್ಲಿ ಸಾಮೂಹಿಕವಾಗಿ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿತ್ತು. ಈ ಹಿಂದೆ ಹರಿಯಾಣ ಸರ್ಕಾರವೂ ಪ್ರಕರಣವನ್ನು ಸಿಬಿಐ ತನಿಖೆ ನೀಡಬೇಕೆಂದು ಕೇಂದ್ರಕ್ಕೆ ಒತ್ತಾಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.