ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಮಂಗಳವಾರ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಸಭೆ ನಡೆಯಿತು. ಈ ವೇಳೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಸಂಸತ್ತಿನ ಉಭಯ ಸದನಗಳಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲ ಕಾಂಗ್ರೆಸ್ ಸಂಸದರು ಭಾಗವಹಿಸಿದ್ದರು.

ಸಭೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸಹ ಇದ್ದರು.

ಐದು ರಾಜ್ಯಗಳ ಚುನಾವಣೆಯಲ್ಲಿ ಪಕ್ಷ ತೋರಿರುವ ಕಳಪೆ ಸಾಧನೆಯ ಬಳಿಕ ನಡೆಯುತ್ತಿರುವ ಮೊದಲನೇ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ಇದಾಗಿದೆ.

ಹಣದುಬ್ಬರ ಮತ್ತು ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.