ನವದೆಹಲಿ: ಭಾರತವು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಆದರೆ, ಕುಟುಂಬ ಯೋಜನೆಯಲ್ಲಿ ಅಗ್ರಗಣ್ಯ ಎನಿಸಿರುವ ದಕ್ಷಿಣದ ರಾಜ್ಯಗಳು ಲೋಕಸಭೆ ಮತ್ತು ರಾಜ್ಯಸಭೆಯ ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶುಕ್ರವಾರ ಆತಂಕ ವ್ಯಕ್ತಪಡಿಸಿದ್ದಾರೆ.

ಜನಸಂಖ್ಯೆಯ ಆಧಾರದ ಮೇಲೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ.

‘ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದ್ದು, ಚೀನಾವನ್ನು ಹಿಂದಿಕ್ಕಿದೆ. ಆದರೆ ಕುಟುಂಬ ಯೋಜನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳು, ಪ್ರಮುಖವಾಗಿ ದಕ್ಷಿಣದ ರಾಜ್ಯಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸ್ಥಾನಗಳನ್ನು ಕಳೆದುಕೊಳ್ಳುತ್ತವೆ’ ಎಂದು ರಮೇಶ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

‘ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ದಕ್ಕೆಯಾಗುವುದಿಲ್ಲ ಎಂಬ ಭರವಸೆ ನೀಡಬೇಕು. ನಾನು ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪಿಸಿದ್ದೇನೆ’ ಎಂದು ರಮೇಶ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.